ಹೊಸಪೇಟೆ: ತುಂಗಭದ್ರಾ ನದಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಸ್ಥಿ ವಿಸರ್ಜನೆ ಮಾಡುವ ವೇಳೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಪಾಲ್ಗೊಂಡಿದ್ದರು. 

ಅಸ್ಥಿ ವಿಸರ್ಜನೆಗೂ ಮುನ್ನ ಹೊಸಪೇಟೆಯಲ್ಲಿ ನಡೆದ ಮೆರವಣಿಗೆಯಲ್ಲಿ ಆನಂದ್ ಸಿಂಗ್ ಸಿಕ್ಕಿಹಾಕಿಕೊಂಡ ಘಟನೆ ಕೂಡ ಶನಿವಾರ ನಡೆದಿದೆ. ಮೆರವಣಿಗೆಯಲ್ಲಿ ಬಿಜೆಪಿ ಶಾಸಕ ಬಿ.ಶ್ರೀರಾಮುಲು ಅವರೊಂದಿಗೆ ಕಾಣಿಸಿಕೊಂಡರು. ನಂತರ ವಾಜಪೇಯಿ ಅವರ ಅಸ್ಥಿ ಕಳಶಕ್ಕೆ ಮತ್ತು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ.