ನವದೆಹಲಿ(ಜು.20): ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕಿ, ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ವಿಧಿವಶರಾಗಿದ್ದಾರೆ.

"

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 81 ವರ್ಷದ ಶೀಲಾ ದೀಕ್ಷಿತ್ ಅವರನ್ನು ಇಂದು ಬೆಳಗ್ಗೆಯಷ್ಟೇ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಾಗಿತ್ತು.

ಸತತ ಮೂರು ಅವಧಿಗೆ ದೆಹಲಿ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಶೀಲಾ ದೀಕ್ಷಿತ್, ಕೇರಳ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಅವರು, ಪಕ್ಷಕ್ಕೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಸದಾ ಮುಂಚೂಣಿಯಲ್ಲಿದ್ದರು.