ಮತ್ತೆ ಸಿದ್ದರಾಮಯ್ಯಗೆ ಸಿಗಲಿದೆಯಾ ಮುಖ್ಯಮಂತ್ರಿ ಪಟ್ಟ?
ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಬದಲಾವಣೆಗಳಾಗಲಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗ್ತಾರಾ ಎನ್ನುವ ಚರ್ಚೆಯೂ ಎದ್ದಿದೆ.
ಕೋಲಾರ : ಸಮ್ಮಿಶ್ರ ಸರ್ಕಾರದಲ್ಲಿ ಮುಂದೆ ಮುಖ್ಯಮಂತ್ರಿಗಳ ಬದಲಾವಣೆ ಆದರೂ ಆದೀತು ಎನ್ನುವ ಸುದ್ದಿಗಳ ನಡುವೆಯೇ ಈಗ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಅವರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಯಾದರೆ ರಾಜ್ಯದ ಹಿತದೃಷ್ಟಿಯಿಂದ ಒಳಿತು ಎಂದು ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಳ್ಳೆಯ ಸರ್ಕಾರವಿದ್ದರೆ ಉತ್ತಮ. ಈ ಹಿನ್ನಲೆಯಲ್ಲಿ ರಾಜ್ಯದ ಹಿತದೃಷ್ಟಿ ಯಿಂದ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಅಭಿಪ್ರಾಯಪಟ್ಟರು. ಅತೃಪ್ತ ಶಾಸಕರಿದ್ದಾರೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವೇ ಅಧಿಕಾರದಲ್ಲಿದ್ದರೂ ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿ ಅತೃಪ್ತ ಶಾಸಕರಿರುವುದು ನಿಜ.
ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ದಂತೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಹೀಗಾಗಿ ಕುಮಾರಸ್ವಾಮಿ ನೇತೃತ್ವದಲ್ಲೇ ರಾಜ್ಯ ದಲ್ಲಿ ನಾವು ಸಾಗುತ್ತಿದ್ದೇವೆ. ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ, ಆ ತೀರ್ಮಾನಕ್ಕೆ ನಾವು ಬದ್ಧ ಎಂದರು. ಇದೇ ವೇಳೆ, ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಹಾಗೂ ದೇಶದಲ್ಲಿ ರಾಜ ಕೀಯ ಬದಲಾವಣೆಗಳು ಆಗುವ ಸಾಧ್ಯತೆಗಳಿವೆ ಎಂಬುದಾಗಿ ಭವಿಷ್ಯ ನುಡಿದ ಸುಧಾಕರ್, ಈ ಚುನಾವಣೆ ವೇಳೆ ಹಲವೆಡೆ ಮೈತ್ರಿ ಧರ್ಮ ಪಾಲನೆ ಆಗಿಲ್ಲ. ಇದರಿಂದ ಕೆಲವೆಡೆ ಮೈತ್ರಿ ಪಕ್ಷಗಳ ಮತ ಗಳು ಬಿಜೆಪಿ ಅಭ್ಯರ್ಥಿಗಳಿಗೆ ಹೋಗಿದೆ ಎಂದರು.