ಬದಾಮಿ(ಮಾ. 05)  ಮೈಸೂರಲ್ಲಿ ಎಚ್.ಡಿ.ದೇವೇಗೌಡ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವ ಜಿ. ಟಿ .ದೇವೇಗೌಡ, ಮೈಸೂರಿನಿಂದ  ಎಚ್ಡಿಡಿ ಸ್ಪರ್ಧಿಸುತ್ತಾರೆ ಎಂಬ ಹೇಳಿಕೆಗೆ ಸಿದ್ದರಾಮಯ್ಯ ಗರಂ ಆಗಿದ್ದರು. ಬಾದಾಮಿ ಮತಕ್ಷೇತ್ರದ  ಕೆಂದೂರಲ್ಲಿ ಮಾತನಾಡಿ, ದೇವೇಗೌಡ ಮೈಸೂರಿನಿಂದ ಸ್ಪರ್ಧೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಯಾರು ಹೇಳಿದ್ದಾರೆ ಅವರನ್ನೇ ಕೇಳಿ ಎಂದು ಗರಂ ಆಗಿಯೇ ಹೇಳಿದರು.

ಲೋಕಸಭಾ ಚುನಾವಣೆ ಘೋಷಣೆಗೆ ಮುಹೂರ್ತ ಫಿಕ್ಸ್?

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ ದೇವೇಗೌಡರ ಸ್ಪರ್ಧೆ ವಿಚಾರದ ಬಗ್ಗೆ ಸ್ಪಷ್ಟವಾಗಿ ಏನೂ ಹೇಳಲಿಲ್ಲ.  ದೋಸ್ತಿಗಳ ನಡುವೆ ಟಿಕೆಟ್ ಹಂಚಿಕೆ ಗೊಂದಲ ಮುಂದುವರಿದೆ ಇದೆ.