ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ನಾಯಕರ ಅಸಮಾಧಾನ

Congress Leader Un Happy With DCM Parameshwar
Highlights

ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರ ನಿಲುವಿಗೆ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಗೊತ್ತಾಗಿದೆ. 

ಬೆಂಗಳೂರು :  ಹಿಂದಿನ ಕಾಂಗ್ರೆಸ್ ಸರ್ಕಾರದ ಎಲ್ಲ ಕಾರ್ಯ ಕ್ರಮಗಳ ಅನುಷ್ಠಾನ ಸಾಧ್ಯವಿಲ್ಲ ಎಂಬ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರ ನಿಲುವಿಗೆ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು
ಗೊತ್ತಾಗಿದೆ. 

ಭಾನುವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಹಿಂದಿನ ಕಾಂಗ್ರೆಸ್ ಸರ್ಕಾರದ ಎಲ್ಲ ಕಾರ್ಯ ಕ್ರಮ ಅನುಷ್ಠಾನ ಮಾಡಲು ಹಣಕಾಸು ಸಮಸ್ಯೆ ಉಂಟಾಗಲಿದೆ. ಹೀಗಾಗಿ ಕೆಲವು ಕಾರ್ಯಕ್ರಮ ಮಾತ್ರ ಮುಂದುವರೆಸಬಹುದು ಎಂದರು. ಅದಕ್ಕೆ ಪರಮೇಶ್ವರ್ ದನಿಗೂಡಿಸಿ ದ್ದರು. ಈ ಬಗ್ಗೆ ಸಭೆಯ ಬಳಿಕ ಪರಮೇಶ್ವರ್ ಅವರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಪಕ್ಷದ ಕಾರ್ಯಕ್ರಮಗಳ ಜೊತೆ ರಾಜಿಯಾಗ ದಂತೆ ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ.

ಸಮನ್ವಯ ಸಮಿತಿ ಸಭೆಯಲ್ಲಿ ಕುಮಾರಸ್ವಾಮಿ ಅವರು ಬಜೆಟ್‌ನಲ್ಲಿ ಕಾಂಗ್ರೆಸ್ ಬಳಿ ಇರುವ ಖಾತೆಗಳಿಗೆ ಇಂತಿಷ್ಟು ಹಣ ಎಂದು ನಿಗದಿ ಮಾಡಲಾಗುವುದು. ನೀವು ಆ ಹಣವನ್ನು ಯಾವ ಕಾರ್ಯಕ್ರಮಕ್ಕಾದರೂ ಬಳಸಿ ಎಂದು ಸಲಹೆ ನೀಡಿದರು. ಇದಕ್ಕೆ ಪರಮೇಶ್ವರ್ ಅಸ್ತು ಎಂದಿದ್ದರು. 

loader