ಬಿಜೆಪಿಯಿಂದ ವಿನಾಶಕಾರಿ ರಾಜಕಾರಣ –ಜಿಲ್ಲೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ ನಾಯಕರು

Congress Leaders Attack BJP
Highlights

ಕೆಪಿಸಿಸಿ  ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್  ಹಾಗೂ ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಬೆಂಗಳೂರು (ಜ.24): ಕೆಪಿಸಿಸಿ  ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್  ಹಾಗೂ ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಮುಖಂಡರು ಬಿಜೆಪಿಯವರು ವಿನಾಕಾರಣ ವಿನಾಶಕಾರಿ ರಾಜಕಾರಣ ಮಾಡುತ್ತಿದ್ದಾರೆ. ಕೋಮು ಧ್ವೇಷದ ಪ್ರಚೋದನೆಯ ಮಾತನ್ನು ಹೇಳುತ್ತಿದ್ದಾರೆ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲು, ಶೋಭಾ, ಜಿಹಾದಿಗಳ ಶಕ್ತಿ ಎಂದು ಜಿಲ್ಲೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ ಎಂದು  ಈ ವೇಳೆ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಅಲ್ಲದೇ ಬಿಜೆಪಿಯವರು ಸಮಾಜದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಇಂತಹ ರಾಜಕಾರಣಿಗಳು ನಮಗೆ ಬೇಕಾ ಎಂದು ಕಾಂಗ್ರೆಸ್  ಪ್ರಶ್ನೆ ಮಾಡುತ್ತಿದೆ. ಜಿಹಾದಿಗಳ ಶಕ್ತಿಗಳಿಂದ ಹಿಂದುಗಳ ಹತ್ಯೆಯಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್ ಕೂಡ ಇದನ್ನೇ ಹೇಳುತ್ತಿದ್ದಾರೆ.  ಸುಳ್ಳನ್ನು ಜನರ ಮುಂದೆ ಹೇಳುತ್ತಿದ್ದಾರೆ ಎಂದು ಈ  ವೇಳೆ ಮುಖಂಡರು ಹೇಳಿದ್ದಾರೆ.

loader