ಕಾಂಗ್ರೆಸ್ ನ ಈ ಪ್ರಭಾವಿ ಮುಖಂಡರು ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ. ಶೀಘ್ರ ಅವರು ಬಿಜೆಪಿ ಸೇರಲಿದ್ದಾರೆ ಬಿ.ಎಸ್ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು : ಪ್ರಭಾವಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸಂಪರ್ಕದಲ್ಲಿದ್ದು, ಮುಂದಿನ ದಿನದಲ್ಲಿ ಒಬ್ಬೊಬ್ಬರಾಗಿ ಬಿಜೆಪಿಗೆ ಬರಲಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆ ವೇಳೆ ಸಂಪರ್ಕದಲ್ಲಿರುವ ಕಾಂಗ್ರೆಸ್‌ನ ಪ್ರಭಾವಿ ನಾಯಕರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನನ್ನೊಂದಿಗೆ ಸಂಪರ್ಕದಲ್ಲಿರುವವರು ಸಚಿವರು ಅಥವಾ ಶಾಸಕರು ಅಲ್ಲ. ಬದಲಿಗೆ ಪ್ರಭಾವಿ ನಾಯಕರಾಗಿದ್ದಾರೆ. ಅವರೆಲ್ಲಾ ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದರು.
