ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ದೆಹಲಿಯಲ್ಲಿ  ರಾಜ್ಯ ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್​ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.

ನವದೆಹಲಿ(ಅ.12): ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್​ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.

ಇಂದು ಸಂಜೆ 4 ಗಂಟೆಗೆ ನಡೆಯುವ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್​ ಗುಂಡೂರಾವ್​ ಮತ್ತು ಎಸ್​. ಆರ್​. ಪಾಟೀಲ್​ ಕೂಡಾ ಪಾಲ್ಗೊಳ್ಳಲಿದ್ದಾರೆ. ಈ ಮಧ್ಯೆ ಇಂದು ದೆಹಲಿಯಲ್ಲಿ ಸಿಎಂ ಕೇಂದ್ರ ಇಂಧನ ಮತ್ತು ಕಲ್ಲಿದ್ದಲು ಸಚಿವರನ್ನು ಕೂಡಾ ಭೇಟಿ ಮಾಡಲಿದ್ದಾರೆ. ವರಿಷ್ಠರ ಭೇಟಿ ಮುಗಿಸಿ ಶುಕ್ರವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸಾಗಲಿದ್ದಾರೆ.