ತುಮಕೂರು: ಕಾಂಗ್ರೆಸ್ ಪಕ್ಷದ ಮೂವರು ಹಿರಿಯ ಮುಖಂಡರು ಮುಖ್ಯಮಂತ್ರಿ ಎ.ಡಿ. ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಯಡಿಯೂರಪ್ಪ ಪುತ್ರ  ಬಿ.ವೈ. ವಿಜಯೇಂದ್ರ ಹೊಸ ‘ಬಾಂಬ್ ಸಿಡಿಸಿ ದ್ದಾರೆ. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಓರ್ವ ಸಚಿವ, ಇಬ್ಬರು ಸಚಿವ ಸ್ಥಾನಾಕಾಂಕ್ಷಿಗಳು ಪ್ರಯತ್ನಿಸುತ್ತಿದ್ದಾರೆ. 

ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರದಿಂದ ಕೆಳಗಿಳಿಯುವುದನ್ನೇ ಕಾಯುತ್ತಿದ್ದಾರೆ. ಸೂಟು-ಬೂಟು ಹೊಲಿಸಿಕೊಂಡು ರೆಡಿಯಾಗಿದ್ದಾರೆ ಎಂದರು.