ಎರಡನೇ ಸ್ಥಾನದಲ್ಲಿರುವ ಪಕ್ಷಕ್ಕೆ ಸರ್ಕಾರ ರಚಿಸುವ ಹಕ್ಕಿಲ್ಲ. ಬಿಜೆಪಿಯು ಮಣಿಪುರ ಹಾಗೂ ಗೋವಾದಲ್ಲಿ ಚುನಾವಣಾ ಫಲಿತಾಂಶಗಳನ್ನು ಕಸಿಯುತ್ತಿದೆ, ಎಂದು ಕಾಂಗ್ರೆಸ್ ನಾಯಕ ಚಿದಂಬರಂ ಟ್ವೀಟ್ ಮಾಡಿದ್ದಾರೆ.
ನವದೆಹಲಿ (ಮಾ.13): ಗೋವಾ ಹಾಗೂ ಮಣಿಪುರ ವಿಧಾನಸಭಾ ಚುನಾವಣೆಗಳಲ್ಲಿ ದ್ವಿತೀಯ ಸ್ಥಾನದಲ್ಲಿದ್ದೂ ಬಿಜೆಪಿ, ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ನಾಯಕರು ಸಿಡಿಮಿಡಿಗೊಂಡಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಪಕ್ಷಕ್ಕೆ ಸರ್ಕಾರ ರಚಿಸುವ ಹಕ್ಕಿಲ್ಲ. ಬಿಜೆಪಿಯು ಮಣಿಪುರ ಹಾಗೂ ಗೋವಾದಲ್ಲಿ ಚುನಾವಣಾ ಫಲಿತಾಂಶಗಳನ್ನು ಕಸಿಯುತ್ತಿದೆ ಎಂದು ಕಾಂಗ್ರೆಸ್ ನಾಯಕ ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಕಸರತ್ತನ್ನು ಕಾಂಗ್ರೆಸ್ ಇನ್ನೋರ್ವ ನಾಯಕ ದಿಗ್ವಿಜಯ್ ಸಿಂಗ್ ಹಣಬಲದ ವಿಜಯವೆಂದು ಬಣ್ಣಿಸಿದ್ದಾರೆ. ‘ಗೋವಾದಲ್ಲಿ ಹಣಬಲವು ಜನಬಲವನ್ನು ಸೋಲಿಸಿದೆ, ಎಂದು ದಿಗ್ವಿಜಯ್ ಸಿಂಗ್ ಟ್ವೀಟಿಸಿದ್ದಾರೆ.
ಗೋವಾದಲ್ಲಿ ಕೋಮು ಶಕ್ತಿಗಳು ಹಾಗೂ ಹಣಬಲ ರಾಜಕೀಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯುವುದೆಂದು ಅವರು ಹೇಳಿದ್ದಾರೆ.
ಗೋವಾದಲ್ಲಿ ಮನೋಹರ್ ಪರ್ರಿಕರ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಮಣಿಪುರದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡುವ ಮೂಲಕ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
