ಸತೀಶ್ ಜಾರಕಿಹೊಳಿ ಮುನಿಸು ಶಮನ

First Published 31, Jan 2018, 8:39 PM IST
Congress Leaders Successfully Pacify  Satish Jarakiholi
Highlights
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುನಿಸಿಕೊಂಡಿದ್ದ ಸತೀಶ್ ಜಾರಕಿಹೊಳಿ
  • ಎರಡು ಹಂತದ ಸಭೆ ನಡೆಸಿದ ಕೆ.ಸಿ. ವೇಣುಗೋಪಾಲ್ ಕೊನೆಗೂ ಮನವೊಲಿಸಲು ಯಶಸ್ವಿ

ಬೆಂಗಳೂರು: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನವೊಲಿಕೆಗೆ ಎರಡು ಹಂತದ ಸಭೆ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತು ವಾರಿ ಕೆ.ಸಿ. ವೇಣುಗೋಪಾಲ್ ಕೊನೆಗೂ ಮನವೊಲಿಸಲು ಯಶಸ್ವಿಯಾಗಿದ್ದಾರೆ.

ರಾಹುಲ್ ಗಾಂಧಿ ಭಾಗವಹಿಸಲಿರುವ ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶದ ಸಿದ್ಧತೆಯಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ತಮಗೆ ಪ್ರಾಮುಖ್ಯತೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸತೀಶ್ ಜಾರಕಿಹೊಳಿ ಮುನಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಮುಂದುವರೆಯುವ ಬಗ್ಗೆ ನಿರ್ಧರಿಸಲು ಬುಧವಾರ ಬೆಂಬಲಿಗರ ಸಭೆ ಕರೆದಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಒಂದು ಗಂಟೆ ನಿರಂತರ ಚರ್ಚೆ ಮಾಡಿದರು.

ಬಳಿಕ ಮತ್ತೊಂದು ಸುತ್ತಿನ ಪ್ರಯತ್ನವಾಗಿ ಮಧ್ಯಾಹ್ನ ಮುಖ್ಯಮಂತ್ರಿಗಳ ನಿವಾಸ ಕಾವೇರಿಗೆ ಕರೆದುಕೊಂಡು ಹೋಗಿ 1 ಗಂಟೆ ಕಾಲ ಸಿಎಂ ಸಮ್ಮುಖದಲ್ಲಿ ಚರ್ಚೆ ನಡೆಸಿದರು.

 

loader