ಪ್ರತಿ ಬಾರಿ ರಾಜ್ಯಕ್ಕೆ ಆಗಮಿಸುವಾಗಲೂ ಕೇಂದ್ರ ಅನುದಾನದ ಲೆಕ್ಕ ಕೊಡಿ ಎಂದು ಕೇಳುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ಶಾ ಹಾಗೂ ನರೇಂದ್ರ ಮೋದಿಗೆ ತಿರುಗೇಟು ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.

ಬೆಂಗಳೂರು : ಪ್ರತಿ ಬಾರಿ ರಾಜ್ಯಕ್ಕೆ ಆಗಮಿಸುವಾಗಲೂ ಕೇಂದ್ರ ಅನುದಾನದ ಲೆಕ್ಕ ಕೊಡಿ ಎಂದು ಕೇಳುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ಶಾ ಹಾಗೂ ನರೇಂದ್ರ ಮೋದಿಗೆ ತಿರುಗೇಟು ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.

ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿ ಕೊಂಡಿದೆ. ಲಕ್ಷ ಕೋಟಿ ರುಪಾಯಿ ಅನುದಾನ ನೀಡಿದ್ದರೂ ಯಾವುದೇ ಕಾರ್ಯ ಮಾಡಿಲ್ಲ. ಅನುದಾನವನ್ನು ಏನು ಮಾಡಲಾಯಿತು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಅಮಿತ್‌ಶಾ ಹಲವು ಬಾರಿ ಒತ್ತಾಯಿಸಿದ್ದರು.

ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಫೆ.4ರಂದು ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದಕ್ಕೂ ಮೊದಲು ಫೆ.3ರಂದು ಮನಮೋಹನ್ ಸಿಂಗ್ ಅವಧಿಯ ಸರ್ಕಾರ ಹಾಗೂ ನರೇಂದ್ರ ಮೋದಿ ಸರ್ಕಾರ ನೀಡಿರುವ ಅನುದಾನದ ಬಗ್ಗೆ ಬಹಿರಂಗಪಡಿಸುತ್ತೇವೆ.

ಅಮಿತ್‌ಶಾ ಕೇಳಿದ ಲೆಕ್ಕಕ್ಕೆ ಸಮರ್ಥವಾಗಿ ಉತ್ತರ ನೀಡುತ್ತೇವೆ. ಅವರಿಗೆ ಲೆಕ್ಕ ಕೊಡುವ ಜತೆಗೆ ಯಾರ್ಯಾರು ಎಷ್ಟೆಷ್ಟು ಹಣ ಕೊಟ್ಟಿದ್ದಾರೆ ಎಂಬುದನ್ನೂ ಬಹಿರಂಗಪಡಿಸುತ್ತೇವೆ ಎಂದು ಹೇಳಿದರು.