ಜೈಪುರ್(ಡಿ.11): ರಾಜಸ್ಥಾನದಲ್ಲಿ ಇನ್ನೇನಿದ್ರೂ ಕಾಂಗ್ರೆಸ್ ಪಕ್ಷದ್ದೇ ಮಾತು. ಕಾರಣ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುತ್ತಿದೆ.

ಈಗಾಗಲೇ ಸ್ಪಷ್ಟ ಬಹುಮತಕ್ಕೆ ಬೇಕಾದ 101 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಕಾಯ್ದುಕೊಂಡಿದೆ. 199 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವುದು ಬಹುತೇಕ ನಿಚ್ಚಳವಾಗಿದೆ.

ಈ ಮಧ್ಯೆ ರಾಷ್ಟ್ರ ರಾಜಧಾನಿ ನವದೆಹಲಿಯ ಕಾಂಗ್ರೆಸ್ ಕಚೇರಿ ಮುಂದೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗಾಗಿ ಹವನ ಏರ್ಪಡಿಸಿದ್ದು, ಐದೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥನೆ ಮಾಡಲಾಗುತ್ತಿದೆ.