ಸಾಲ ಮನ್ನಾ ವಿಚಾರ 15 ದಿನ ಮೊದಲೇ ಗೊತ್ತಿತ್ತು; ಕಾಂಗ್ರೆಸ್ ಶಾಸಕರಿಂದ ವಿವಾದದ ಹೇಳಿಕೆ

First Published 4, Mar 2018, 11:34 AM IST
Congress MLA Controversial Statement
Highlights

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಚಾಲ್ತಿಯಲ್ಲಿರುವ ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತುಮಕೂರು (ಮಾ. 04): ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಚಾಲ್ತಿಯಲ್ಲಿರುವ ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ವಿಚಾರ ನನಗೆ 15 ದಿನದ ಮೊದಲೇ ಗೊತ್ತಿತ್ತು. ಹಾಗಾಗಿ ನನ್ನ ಕ್ಷೇತ್ರದ ಜನರಿಗೆ ಸಾಲ ತೆಗೆದುಕೊಳ್ಳುವಂತೆ ಹೇಳಿದ್ದೆ. ಅವರು ಸಾಲ ಪಡೆದುಕೊಂಡು ಈಗ ನೆಮ್ಮದಿಯಿಂದ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. 

ಮಧುಗಿರಿಯ ಬಡವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಈ ರೀತಿ ಮಾತನಾಡಿ ವಿವಾದ ಹುಟ್ಟುಹಾಕಿದ್ದಾರೆ. ಸಚಿವ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜಣ್ಣ ಗಂಟಾಘೋಷವಾಗಿ ಸಾಲ ಮನ್ನಾ ರಹಸ್ಯವನ್ನ ಬಿಚ್ಚಿಟ್ಟಿದ್ದಾರೆ. 
  

loader