ಬೆಂಗಳೂರು [ಜು.20]: ಮುಂಬೈನಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ವಿಚಾರಿಸಲು ಸ್ಪೀಕರ್ ತಂಡ ರಚಿಸಿ ಕಳಿಸಿಕೊಟ್ಟಿದ್ದಾರೆ. ಆದರೆ ಬಿಜೆಪಿಯವರು ಅವರನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. 

ಸದನದಲ್ಲಿ ಡಿ.ಕೆ. ಶಿವಕುಮಾರ್ ಫೋಟೊ ಹಿಡಿದುಕೊಂಡು ದಾಂಧಲೆ ಮಾಡಿದರು. ಇಲ್ಲಸಲ್ಲದ ಆರೋಪ ಮಾಡಿದ್ದಕ್ಕೆ ಕ್ಷಮೆ ಯಾಚಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.

ಈಗಾಗಲೇ ವಿಶ್ವಾಸಮತಕ್ಕೆ ಸಮಯ ನಿಗದಿ ಮಾಡಿದ್ದು, ಸುಪ್ರೀಂ ಸ್ಪಷ್ಟವಾದ ತೀರ್ಪು ನೀಡಿದೆ. ಇನ್ನು ಮೈತ್ರಿ ಪಾಳಯ ವಿಪ್ ಜಾರಿ ಮಾಡಿದಲ್ಲಿ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತು ಸಿಗುವುದಿಲ್ಲ ಎಂದು ಬಿಎಸ್ ವೈ ಹೇಳಿದರು. 

ಕರ್ನಾಟಕ ರಾಜಕೀಯ ಪ್ರಹಸನದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರಕ್ಕೆ ರಾಜ್ಯಪಾಲರು ಸೂಚನೆ ಕೊಟ್ಟಿದ್ದರೂ ಕೂಡ ಅವರಿನ್ನೂ ಬಹುಮತ ಸಾಬೀತು ಪಡಿಸಿಲ್ಲ. ಬಹುಮತ ಇಲ್ಲದಿದ್ದರೆ ಮುಖ್ಯಮಂತ್ರಿಗಳು ಒಂದು ಕ್ಷಣ ಇರಬಾರದು. ಬಹುಮತ ಇದ್ದರೆ ಸಾಬೀತು ಮಾಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ವಾಕ್ ಪ್ರಹಾರ ನಡೆಸಿದರು.