ಮೇಘಾಲಯದ ವಿಧಾನಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್‌ನ ಮಾರ್ಟಿನ್‌ ಡಿ.ಡ್ಯಾಂಗೋ ಗುರುವಾರ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ಶಿಲ್ಲಾಂಗ್‌: ವಿಧಾನಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್‌ ಶಾಸಕರು ಇದೀಗ ಪಕ್ಷವನ್ನು ತೊರೆದಿದ್ದಾರೆ. 

ಮೇಘಾಲಯದ ಶಾಸಕ ಮಾರ್ಟಿನ್‌ ಡಿ.ಡ್ಯಾಂಗೋ ಗುರುವಾರ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ಇದರೊಂದಿಗೆ ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷ ಎಂಬ ಹಿರಿಮೆಯನ್ನು ಕಾಂಗ್ರೆಸ್‌ ಕಳೆದುಕೊಂಡಿದೆ. ಮಾರ್ಟಿನ್‌ ಅವರು ಆಡಳಿತಾರೂಢ ನಾಗಾ ಪೀಪಲ್‌ ಪಾರ್ಟಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. 

ಇದೇ ವರ್ಷದ ಫೆಬ್ರವರಿಯಲ್ಲಿ 60 ಸಂಖ್ಯಾಬಲದ ಮೇಘಾಲಯ ವಿಧಾನಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ 21 ಸ್ಥಾನಗಳನ್ನು ಗಳಿಸಿಕೊಳ್ಳುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.