ಗೋಕಾಕ: ರಾಜ್ಯದ ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಭದ್ರವಾಗಿದೆ. ಸರ್ಕಾರ ಬದಲಿಸುವ ಪ್ರಶ್ನೆಯೇ ಇಲ್ಲ. ಸರ್ಕಾರದ ಹಾಗೂ ನಮ್ಮ ನಡುವೆ ಕೆಲವು ಆಂತರಿಕ ಭಿನ್ನಾಭಿಪ್ರಾಯಗಳಿವೆ. 

ನಮ್ಮ ಬೇಡಿಕೆಗಳನ್ನು ನಾವು ಹೋರಾಟದ ಮೂಲಕ ಪಡೆಯುತ್ತೇವೆಯೇ ಹೊರತು ಸರ್ಕಾರ ಬದಲಿಸುವ ಮೂಲಕವಲ್ಲ ಎಂದು ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಕಾರ್ಯಕ್ರಮವೊಂದರಲ್ಲಿ ಪತ್ರಕರ್ತರು, ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟವಿಷಯ. 

ಸಚಿವ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ಧವಿರುವುದಾಗಿ ತಿಳಿಸಿದರು.