ಸಾಲ ಮನ್ನಾ ಮಾಡಲು ಕಾಂಗ್ರೆಸ್‌ ಅಡ್ಡಿ ಮಾಡುತ್ತಿದ್ದು ಆ ಪಕ್ಷದ ನಾಯಕರ ಶರತ್ತಿನಿಂದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಾಕಷ್ಟುಮುಜುಗರ ಅನುಭವಿಸುತ್ತಿದ್ದಾರೆ ಎಂದು ಶ್ರೀರಂಗಪ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಆಪಾದಿಸಿದ್ದಾರೆ.

ಶ್ರೀರಂಗಪಟ್ಟಣ: ಸಾಲ ಮನ್ನಾ ಮಾಡಲು ಕಾಂಗ್ರೆಸ್‌ ಅಡ್ಡಿ ಮಾಡುತ್ತಿದ್ದು ಆ ಪಕ್ಷದ ನಾಯಕರ ಶರತ್ತಿನಿಂದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಾಕಷ್ಟುಮುಜುಗರ ಅನುಭವಿಸುತ್ತಿದ್ದಾರೆ ಎಂದು ಶ್ರೀರಂಗಪ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಆಪಾದಿಸಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವೀಂದ್ರ, ಸಾಲಮನ್ನಾ ಮಾಡಲು ಹಣಕಾಸು ಖಾತೆ ಮುಖ್ಯವಾಗಿದ್ದು, ಅದನ್ನು ಸಿಎಂಗೆ ಬಿಟ್ಟು ಕೊಡುವುದಕ್ಕೆ ಕಾಂಗ್ರೆಸ್‌ ನಾಯಕರು ಒಪ್ಪುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್‌ ನಾಯಕರು ಮೈತ್ರಿ ಮುನ್ನಾ ಬೇಷರತ್‌ ಬೆಂಬಲ ನೀಡುವುದಾಗಿ ಹೇಳಿ, ಜೆಡಿಎಸ್‌ ಜೊತೆ ಕಾಂಗ್ರೆಸ್‌ ನಾಯಕರು ಕೈ ಜೋಡಿಸಿದ್ದರು. ಆದರೆ ಸರ್ಕಾರ ರಚನೆ ಬಳಿಕ ಷರತ್ತುಗಳ ಮೇಲೆ ಷರತ್ತುಗಳನ್ನು ಹಾಕುತ್ತಿದ್ದಾರೆ. ಖಾತೆ ಹಂಚಿಕೆ ವಿಚಾರದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇದರಿಂದ ಸಿಎಂ ಕುಮಾರಸ್ವಾಮಿಗೆ ಸಾಕಷ್ಟುಮುಜುಗರ ಆಗುತ್ತಿದೆ ಎಂದು ಕಿಡಿಕಾರಿದರು.