ಜಮಖಂಡಿಯ ಹಾಲಿ ಶಾಸಕ ಸಿದ್ದು ನ್ಯಾಮಗೌಡ ಅವರ ಮರಣದಿಂದಾಗಿ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡರ ಪುತ್ರ ಆನಂದ್ ಸಿದ್ದು ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ. 

ಬೆಂಗಳೂರು: ಜಮಖಂಡಿಯ ಹಾಲಿ ಶಾಸಕ ಸಿದ್ದು ನ್ಯಾಮಗೌಡ ಅವರ ಮರಣದಿಂದಾಗಿ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡರ ಪುತ್ರ ಆನಂದ್ ಸಿದ್ದು ನ್ಯಾಮಗೌಡ ಅವರನ್ನು ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದು ನ್ಯಾಮಗೌಡ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಹೀಗಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಅವರ ಪುತ್ರನಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.