ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಮಾಡುತ್ತಿರುವ ವಿನೂತನ ಕಾರ್ಯಕ್ರಮ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ.

ಬೆಂಗಳೂರು(ಸೆ.23): ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಮಾಡುತ್ತಿರುವ ವಿನೂತನ ಕಾರ್ಯಕ್ರಮ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ.

ಬೆಂಗಳೂರಿನ ವಿಧಾನಸಭಾ ಕ್ಷೇತ್ರ ಮಹದೇವಪುರದಲ್ಲಿ ಚಾಲನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಬೃಹತ್ ವೇದಿಕೆ ಕೂಡಾ ಸಿದ್ಧಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ ಹಾಗೂ ನಗರದ ಎಲ್ಲ ಸಚಿವರು, ಶಾಸಕರು, ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು ನಗರಕ್ಕೆ ಮಹದೇವಪುರದ ವಾಸ್ತು ಅತ್ಯುತ್ತಮವಾಗಿದೆ ಎಂಬ ಕಾರಣಕ್ಕೆ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಲ್ಲಿ ಚಾಲನೆ ನೀಡಲಾಗುತ್ತಿದೆ ಎನ್ನಲಾಗಿದೆ. ಈ ಭಾಗದಲ್ಲಿ ಇಂದು ಸಾರ್ವಜನಿಕರಿಗೆ ತೊಂದರೆ ಆಗುವ ಸಾಧ್ಯತೆ ಇದೆ.