ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಮತ್ತೊಂದು ವಿವಾದಕ್ಕೆ ಒಳಗಾಗಿದ್ದಾರೆ. ಬಿಹಾರದ ಹಲವು ಪ್ರದೇಶಗಳಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಫೊಟೊ ಜೊತೆಗೆ ಜಾತಿಯನ್ನು ಹಾಕಿಕೊಂಡು ಪೋಸ್ಟರ್ ಹಾಕಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಪಾಟ್ನಾ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಮತ್ತೊಂದು ವಿವಾದಕ್ಕೆ ಒಳಗಾಗಿದ್ದಾರೆ. ಬಿಹಾರದ ಹಲವು ಪ್ರದೇಶಗಳಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಫೋಟೊ ಜೊತೆಗೆ ಜಾತಿಯನ್ನು ಸೇರಿಸಿ ಪೋಸ್ಟರ್ ಹಾಕಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಈ ಸಂಬಂಧ ಬಿಜೆಪಿ ಮುಖಂಡರು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ರೀತಿ ಮಾಡಿರುವುದಕ್ಕೆ ಕ್ಷಮೆ ಕೇಳಬೇಕು ಎಂದಿದ್ದಾರೆ.
ಇದೊಂದು ಜಾತಿ ರಾಜಕಾರಣವಾಗಿದ್ದು, ಕಾಂಗ್ರೆಸ್ ಮುಖಂಡರು ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಪೋಸ್ಟರ್ ನಲ್ಲಿ ರಾಹುಲ್ ಗಾಂಧಿ ಜೊತೆಗೆ ಅನೇಕ ಹಿರಿಯ ಕಾಂಗ್ರೆಸ್ ನಾಯಕರ ಫೋಟೊಗಳನ್ನು ಹಾಕಲಾಗಿದ್ದು, ಅದರಲ್ಲಿ ಎಲ್ಲರ ಜಾತಿಗಳನ್ನು ಹಾಕಲಾಗಿದೆ.
ಪೋಸ್ಟರ್ ನಲ್ಲಿ ರಾಹುಲ್ ಗಾಂಧಿ, ಬಿಹಾರ ಕಾಂಗ್ರೆಸ್ ಅಧ್ಯಕ್ಷ ಮದನ್ ಮೋಹನ್ ಜಾ ಅವರನ್ನು ಬ್ರಾಹ್ಮಣ ಸಮುದಾಯ ಎಂದು ಹಾಕಲಾಗಿದ್ದು, ಶಕ್ತಿಸಿನ್ಹಾ ಗೋಹಿಲ್ ಅವರನ್ನು ರಜಪೂತ ಸಮುದಾಯ ಎಂದು ಹಾಕಲಾಗಿದೆ. ಇನ್ನು ಅಖಿಲೇಶ್ ಪ್ರಸಾದ್ ಸಿಂಗ್, ಸದಾನಂದ ಸಿಂಗ್ ಸೇರಿದಂತೆ ವಿವಿಧ ಮುಖಂಡರನ್ನು ಕೂಡ ಈ ಪೋಸ್ಟರ್ ನಲ್ಲಿ ಹಾಕಲಾಗಿದೆ.
