Asianet Suvarna News Asianet Suvarna News

ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಕಾಂಗ್ರೆಸ್ ಸಂಸದರ ಪ್ರತಿಭಟನೆ

ಕಾವೇರಿ ವಿವಾದ ಬಗೆಹರಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸಂಸದರ ಪ್ರತಿಭಟನೆ

congress protest in delhi

ನವದೆಹಲಿ(ಸೆ.27): ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇವತ್ತು ಸುಪ್ರೀಂಕೋರ್ಟ್`ನಲ್ಲಿ ವಿಚಾರಣೆ ನಡೆಯುತ್ತಿದೆ. ಕಾವೇರಿ ತೀರ್ಪನ್ನ ಮಾರ್ಪಾಡು ಮಾಡುವಂತೆ ಕರ್ನಾಟಕ ಸಲ್ಲಿಸಿರುವ ಅರ್ಜಿ ಮತ್ತು ನೀರು ಬಿಡುವವರೆಗೂ ರ್ನಾಟಕದ ವಾದ ಆಲಿಸದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್`ನಿಂದ ನ್ಯಾಯಾಂಗ ನಿಂದನೆಯ ತೂಗುಗತ್ತಿ ಬೀಳುತ್ತಾ ಎಂಬ ವಾದಗಳು ಕೇಳಿಬರುತ್ತಿವೆ.

ಈ ಮಧ್ಯೆ, ಕಾವೇರಿ ವಿವಾದ ಬಗೆಹರಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ, ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್​ ಭವನದ ಗಾಂಧಿ ಪ್ರತಿಮೆ ಬಳಿ ಧರಣಿ  ನಡೆಸುತ್ತಿರುವ ಕರ್ನಾಟಕದ ಸಂಸದರು ಪ್ರಧಾನಿ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದ್ದಾರೆ. ಕಾವೇರಿ ನಮ್ಮದು, ನಮಗೆ ಕುಡಿಯುವ ನೀರು ಬೇಕು ಮೋ ಜಿ ಎಂದು ಘೋಷಣೆ ಕೂಗುತ್ತಿದ್ದಾರೆ.