ಹರಿಯಾಣದ ಕುಮಾರಸ್ವಾಮಿ ಆಗ್ತಾರಾ ದುಷ್ಯಂತ್: ದೋಸ್ತಿ ಬಯಸಿದೆ ಕಾಂಗ್ರೆಸ್!
ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ಆರಂಭ| ನಿರೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆ| ಹರಿಯಾಣದಲ್ಲಿಆಡಳಿತಾರೂಢ ಬಿಜೆಪಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲ| ಹರಿಯಾಣದಲ್ಲಿ ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 40 ಸ್ಥಾನಗಳಲ್ಲಿ ಮುನ್ನಡೆ| ಹರಿಯಾಣದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಕಾಂಗ್ರೆಸ್ ಹಾಗೂ ಜೆಜೆಪಿ| ಹರಿಯಾಣದಲ್ಲಿ ಕಾಂಗ್ರೆಸ್-ಜೆಜೆಪಿ ಮೈತ್ರಿ ಸಾಧ್ಯತೆ| ಹರಿಯಾಣದ ಕುಮಾರಸ್ವಾಮಿ ಆಗ್ತಾರಾ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ?| ಹರಿಯಾಣದಲ್ಲಿ ಕರ್ನಾಟಕ ಫಾರ್ಮುಲಾ ಅನುಸರಿಸಲು ಮುಂದಾದ ಕಾಂಗ್ರೆಸ್?|
ಚಂಡೀಘಢ್(ಅ.24): ತೀವ್ರ ಕುತೂಹಲ ಮೂಡಿಸಿರುವ ಹರಿಯಾಣ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಹರಿಯಾಣದಲ್ಲಿ ಮಾತ್ರ ಆಡಳಿತಾರೂಢ ಬಿಜೆಪಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾದಂತಿದೆ.
ಒಟ್ಟು 90 ಸೀಟುಗಳ ಹರಿಯಾಣ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ, ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅದರಂತೆ ಕಾಂಗ್ರೆಸ್ 30ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಈಗಾಗಲೇ ಮೈತ್ರಿ ಮಾತುಗಳು ಕೇಳಿ ಬರುತ್ತಿದ್ದು, ಕಾಂಗ್ರೆಸ್-ಜೆಜೆಪಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಈಗಾಗಲೇ ಕಾಂಗ್ರೆಸ್ ದುಷ್ಯಂತ್ ಚೌಟಾಲಾ ಅವರನ್ನು ಭೇಟಿ ಮಾಡಿ ಮೊದಲ ಸುತ್ತಿನ ಮಾತುಕತೆ ನಡೆಸಿದೆ.
ಮಹಾರಾಷ್ಟ್ರ, ಹರಿಯಾಣ: ಚುನಾವಣೋತ್ತರ ಸಮೀಕ್ಷೆ ಅಂದಾಜಿಗೆ ವಿಪಕ್ಷ ಹೈರಾಣ!...
ನಿನ್ನೆ ಸಂಜೆಯೇ ಜೆಜೆಪಿಯ ದುಷ್ಯಂತ್ ಚೌಟಾಲಾ ಅವರನ್ನು ಭೇಟಿ ಮಾಡಿರುವ ದಿಪೇಂದ್ರ ಸಿಂಗ್ ಹೂಡಾ, ಮೈತ್ರಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ದುಷ್ಯಂತ್ ಚೌಟಾಲಾ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರೂ ಅಚ್ಚರಿಯಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕಾಂಗ್ರೆಸ್-ಜೆಜೆಪಿ ಮೈತ್ರಿ ಮಾತುಗಳು ಕೇಳಿ ಬರುತ್ತಿದ್ದಂತೇ, ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಹರಿಯಾಣದ ಕುಮಾರಸ್ವಾಮಿ ಆಗ್ತಾರಾ ಎಂಬ ಪ್ರಶ್ನೆ ಮೂಡಿದೆ. 2018ರಲ್ಲಿ ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು.
ಬಿಜೆಪಿಯ 'ಸತ್ಯವಾದಿ' ನಾಯಕ ಯಾರೆಂದು ಹೇಳಿದ ರಾಹುಲ್ ಗಾಂಧಿ!
ಜೆಡಿಎಸ್‌ಗಿಂತ ಅಧಿಕ ಸ್ಥಾನ ಗಳಿಸಿದ್ದರೂ ಕಾಂಗ್ರೆಸ್ ಮುಖ್ಯಮಂತ್ರಿ ಪಟ್ಗಟವನ್ನು ಬಿಟ್ಟುಕೊಟ್ಟ ಪರಿಣಾಮ ಜೆಡಿಎಸ್‌ನ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಇದೇ ಫಾರ್ಮುಲಾವನ್ನು ಕಾಂಗ್ರೆಸ್ ಹರಿಯಾಣದಲ್ಲೂ ಅನುಸರಿಸಲು ಮುಂದಾದರೆ ದುಷ್ಯಂತ್ ಚೌಟಾಲಾ ಹರಿಯಾಣದ ಕುಮಾರಸ್ವಾಮಿ ಆಗುವುದರಲ್ಲಿ ಎರಡು ಮಾತಿಲ್ಲ.