ಕೋಲ್ಕತಾ :  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಮುಖ ನಿರ್ಧಾರ ಒಂದನ್ನು ಕೈಗೊಂಡಿದ್ದು, ಪಕ್ಷದ ಪ್ರಮುಖ ಸ್ಥಾನವೊಂದಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. 

ಪಶ್ಚಿಮ ಬಂಗಾಳ  ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದ ಅಧಿರ್ ರಂಜನ್ ಚೌಧರಿ ಅವರನ್ನು ಕೆಳಕ್ಕಿಳಿಸಿ ಅವರ ಸ್ಥಾನಕ್ಕೆ ಸೋಮೇಂದ್ರ ನಾಥ್ ಮಿತ್ರಾ ಅವರನ್ನು ನೇಮಕ ಮಾಡಲಾಗಿದೆ. 

ಅಲ್ಲದೇ ಚೌಧರಿ ಅವರನ್ನು ರಾಜ್ಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

ಆ್ಯಂಟಿ ಮಮತಾ ಬ್ಯಾನರ್ಜಿ ದೃಷ್ಟಿಕೋನದಲ್ಲಿ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಿರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 

2019ಚುನಾವಣಾ ದೃಷ್ಟಿಕೋನವನ್ನು ಇರಸಿಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಚೌಧರಿ ಅವರು ತಮಗೆ ಈ ಬಗ್ಗೆ ಯಾವುದೇ ಮಾಹಿತಿಯನ್ನೂ ಕೂಡ ನೀಡಿರಲಿಲ್ಲ ಎಂದು ಹೇಳಿದ್ದಾರೆ.