ಪಂಚರಾಜ್ಯಗಳಲ್ಲಿ ಮುಕ್ತ ಹಾಗೂ ಪಾರದರ್ಶಿಕವಾಗಿ ಚುನಾವಣೆ ನಡೆಸಲು ಈ ರಾಜ್ಯಗಳಲ್ಲಿ ಪ್ರಧಾನಿ ಮೋದಿಯವರ ಪೋಸ್ಟರ್ ಗಳನ್ನು ತೆಗೆದು ಹಾಕಿಸಿ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಕೇಳಿಕೊಂಡಿದೆ.

ನವದೆಹಲಿ (ಜ.09): ಪಂಚರಾಜ್ಯಗಳಲ್ಲಿ ಮುಕ್ತ ಹಾಗೂ ಪಾರದರ್ಶಿಕವಾಗಿ ಚುನಾವಣೆ ನಡೆಸಲು ಈ ರಾಜ್ಯಗಳಲ್ಲಿ ಪ್ರಧಾನಿ ಮೋದಿಯವರ ಪೋಸ್ಟರ್ ಗಳನ್ನು ತೆಗೆದು ಹಾಕಿಸಿ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಕೇಳಿಕೊಂಡಿದೆ.

ಬಹುತೇಕ ಪೆಟ್ರೋಲ್ ಬಂಕ್ ಗಳಲ್ಲಿ ಅಡುಗೆ ಅನಿಲ ವಿತರಣೆ ಸಂಬಂಧಿಸಿದಂತೆ ಮೋದಿಯವರ ಪೋಸ್ಟರ್ ಗಳನ್ನು ಹಾಕಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ರೀತಿ ಜಾಹಿರಾತುಗಳಿಗೆ ಅವಕಾಶವಿಲ್ಲ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಹೇಳಿದೆ.

ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ದಿನದಿಂದ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ.