ಬೆಂಗಳೂರು(ಜು.09): ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಬಾರ್ ಮತ್ತು ದುಬಾರಿ ರೆಸ್ಟೋರೆಂಟ್'ಗಳಲ್ಲಿ ನೇಮಿಸುತ್ತದೆ ಎಂದು ಕಾಂಗ್ರೆಸ್ ಹರಿಹಾಯ್ದಿದೆ.

ಕರ್ನಾಟಕ ರಾಜಕೀಯ ವಿಪ್ಲವ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಶಾಸಕರನ್ನು ಅಪಹರಿಸುವ ಮೂಲಕ, ಖರೀದಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಬಿಜೆಪಿಯೇ ಕಾರಣ ಎಂದಿರುವ ಆಜಾದ್, ಶಾಸಕರನ್ನು ಒತ್ತಾಯಪೂರ್ವಕವಾಗಿ ಮುಂಬೈಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಉಪಸ್ಥಿತರಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

"

ರಾಜ್ಯವೊಂದರ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಬಿಜೆಪಿ ಬಾರ್ ಮತ್ತು ರೆಸ್ಟೋರೆಂಟ್'ಗಳಲ್ಲಿ ನಿರ್ಧರಿಸುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಆಜಾದ್ ಗಂಭೀರ ಆರೋಪ ಮಾಡಿದ್ದಾರೆ.