ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಹಾಗೂ 105 ಕ್ಷೇತ್ರಗಳಿಂದ ಸ್ಫರ್ಧಿಸಲಿದೆಯೆಂದು ತಿಳಿದುಬಂದಿದೆ.

ನವದೆಹಲಿ (ಜ.22): ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಕೊನೆಗೂ ಒಪ್ಪಿಕೊಂಡಿದೆಯೆಂದು ವರದಿಯಾಗಿದೆ.

ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಹಾಗೂ 105 ಕ್ಷೇತ್ರಗಳಿಂದ ಸ್ಫರ್ಧಿಸಲಿದೆಯೆಂದು ತಿಳಿದುಬಂದಿದೆ.

ಸೀಟು ಹಂಚಿಕೆ ವಿಚಾರದಲ್ಲಿರುವ ಭಿನ್ನಾಭಿಪ್ರಾಯಗಳಿಂದಾಗಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಖಚಿತ ನಿರ್ಧಾರಕ್ಕೆ ಬಂದಿರಲಿಲ್ಲ. ಕಾಂಗ್ರೆಸ್ 121 ಸೀಟುಗಳಲ್ಲಿ ಸ್ಫರ್ಧಿಸಬಯಸುತ್ತಿದ್ದರೆ, ಅಖಿಲೇಶ್ ನೂರಕ್ಕಿಂತ ಹೆಚ್ಚು ಸೀಟುಗಳನ್ನು ಬಿಟ್ಟುಕೊಡಲು ತಯಾರಿರಲಿಲ್ಲವೆನ್ನಲಾಗಿತ್ತು.

ಮುಂದಿನ ಫೆ.11 ರಿಂದ 7 ಹಂತಗಳಲ್ಲಿ 403 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷ ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.