ಮೋದಿ-ಶಾ ಜೋಡಿ ದೇಶಕ್ಕೆ ಅಪಾಯಕಾರಿ: ಕಾಂಗ್ರೆಸ್‌

Congress Slams PM Modi And Amith Shah
Highlights

ಕಳೆದ ನಾಲ್ಕು ವರ್ಷಗಳ ಎನ್‌ಡಿಎ ಸರ್ಕಾರದ ಆಡಳಿತದ ವೈಖರಿಯಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ದೇಶಕ್ಕೆ ಅಪಾಯಕಾರಿ ಎಂಬುದನ್ನು ಜನತೆ ಅರ್ಥೈಸಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಗುಡುಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಸರ್ಕಾರವು ವಂಚನೆ, ಸೇಡು ಮತ್ತು ಸುಳ್ಳುಗಳಿಂದ ಜನರನ್ನು ವಂಚಿಸಿದೆ ಎಂದು ಕಾಂಗ್ರೆಸ್‌ ದೂರಿದೆ.

ನವದೆಹಲಿ: ಕಳೆದ ನಾಲ್ಕು ವರ್ಷಗಳ ಎನ್‌ಡಿಎ ಸರ್ಕಾರದ ಆಡಳಿತದ ವೈಖರಿಯಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ದೇಶಕ್ಕೆ ಅಪಾಯಕಾರಿ ಎಂಬುದನ್ನು ಜನತೆ ಅರ್ಥೈಸಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಗುಡುಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಸರ್ಕಾರವು ವಂಚನೆ, ಸೇಡು ಮತ್ತು ಸುಳ್ಳುಗಳಿಂದ ಜನರನ್ನು ವಂಚಿಸಿದೆ ಎಂದು ಕಾಂಗ್ರೆಸ್‌ ದೂರಿದೆ.

ಎನ್‌ಡಿಎ ಸರ್ಕಾರದ ನಾಲ್ಕು ವರ್ಷಗಳ ಆಡಳಿತಾವಧಿಯನ್ನು ಶನಿವಾರ ವಿಶ್ವಾಸಘಾತಕ ದಿನವನ್ನಾಗಿ ಆಚರಿಸಿದ ಕಾಂಗ್ರೆಸ್‌, ‘ಭಾರತಕ್ಕೆ ದ್ರೋಹ’ ಎಂಬ ಶೀರ್ಷಿಕೆಯಡಿ ಕಿರುಹೊತ್ತಿಗೆ ಬಿಡುಗಡೆ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್‌ ಮುಖಂಡರಾದ ಗುಲಾಂ ನಬಿ ಆಜಾದ್‌, ಅಶೋಕ್‌ ಗೆಹ್ಲೋಟ್‌ ಮತ್ತು ರಣದೀಪ್‌ ಸುರ್ಜೇವಾಲಾ, ‘ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲಾಗಿದೆ,’ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಅವರು ದೇಶಕ್ಕೆ ಮಾರಕ ಎಂಬುದು ದೇಶದ ಜನತೆ ಇದೀಗ ಅರ್ಥೈಸಿಕೊಂಡಿದ್ದಾರೆ. ಈ ನಾಲ್ಕು ವರ್ಷಗಳ ಮೋದಿ ಆಡಳಿತಾವಧಿಯನ್ನು ವಂಚನೆ, ಮೋಸ, ಸೇಡು ಮತ್ತು ಸುಳ್ಳುಗಳು ಎಂಬುದಾಗಿ ವ್ಯಾಖ್ಯಾನಿಸಬಹುದಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲಾ ಕಿಡಿಕಾರಿದರು. ಬಿಜೆಪಿ ಆಡಳಿತಾವಧಿಯಲ್ಲಿ ದೇಶದಲ್ಲಿ ದಲಿತರು, ಬುಡಕಟ್ಟು ಜನಾಂಗ, ಮಹಿಳೆಯರು ಸೇರಿದಂತೆ ಯಾರೊಬ್ಬರು ಸುರಕ್ಷಿತವಾಗಿಲ್ಲ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್‌ ಅವರು ದೂರಿದರು.

loader