ಬೆಂಗಳೂರು[ಮಾ. 18]  ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಇದೀಗ ಬೆಂಗಳೂರಿನಲ್ಲಿ ಪ್ರತ್ಯಕ್ಷರಾಗಿದ್ದಾರೆ. 

ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನವೋದ್ಯಮಿಗಳ ಜತೆ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು ಇಲ್ಲಿ 'ಪದ್ಮಾವತಿ' ಕಾಣಿಸಿಕೊಂಡಿದ್ದಾರೆ.

ರಮ್ಯಾ ಮಾಡಿಕೊಂಡ ಎಡವಟ್ಟು!

ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಮೃತಪಟ್ಟ ಸಮಯದಲ್ಲೂ ರಾಜ್ಯಕ್ಕೆ ರಮ್ಯಾ ಬಂದಿರಲಿಲ್ಲ.  ಮಂಡ್ಯದಿಂದ ಮನೆ ಖಾಲಿ ಮಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಇದೀಗ ರಾಹುಲ್ ಗಾಂಧಿ ಕಾರ್ಯಕ್ರಮಕ್ಕಾಗಿ ರಾಜ್ಯಕ್ಕೆ ಬಂದಿರುವುದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಿನ್ನ ಪ್ರತಿಕ್ರಿಯೆ ಬಂದಿದೆ.

"