ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ದೇಶದ 28 ರಾಜ್ಯಗಳ 100 ಜಿಲ್ಲೆಗಳಲ್ಲಿ ದೂರು ದಾಖಲಿಸಿ ಈ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಲಾಗಿದೆ.  

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ, ದೇಶದ 28 ರಾಜ್ಯಗಳ 100 ಜಿಲ್ಲೆಗಳಲ್ಲಿ ದೂರು ದಾಖಲಿಸಿಸುವ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇಶಾದ್ಯಂತ ಬಿಜೆಪಿ ಅಡಳಿತದ ರಾಜ್ಯಗಳಲ್ಲಿ ಅಮಾಯಕರ ಹತ್ಯೆ ನಡೆಯುತ್ತಿದೆ. ಈ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ. ಇದಕ್ಕೆ ಬಿಜೆಪಿ ರಕ್ಷಣೆ ಇದೆ. ಅಮಿತ್‌ ಶಾ ಬಿಜೆಪಿ ಅಧ್ಯಕ್ಷ ಎಂಬ ಏಕೈಕ ಕಾರಣಕ್ಕೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ.

ಶಾ ನೆಲದ ಕಾನೂನನ್ನು ಬುಡಮೇಲುಗೊಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.