ಪಕ್ಷದ ವಿರುದ್ಧ ಮಾತನಾಡಿದ್ದ ಶಿವಾಜಿನಗರ ಶಾಸಕ ರೋಶನ್ ಬೇಗ್ ಅವರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಎಐಸಿಸಿ ಅನುಮತಿ ಪಡೆದುಕೊಂಡ ಕರ್ನಾಟಕ ಪ್ರದೇಶ ಕಾಂಗ್ರೆಸ್ ರೋಶನ್ ಅವರನ್ನು ಅಮಾನತು ಮಾಡಿದೆ.

ಬೆಂಗಳೂರು[ಜೂ. 17] ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಆರ್. ರೋಶನ್ ಬೇಗ್ ಅವರನ್ನು ಅಮಾನತು ಮಾಡಲಾಗಿದೆ. ಶಿವಾಜಿನಗರ ಶಾಸಕರಾದ ಬೇಗ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಕಾರಣ ಒಡ್ಡಿ ಅಮಾನತು ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೋಶನ್ ಬೇಗ್ ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆಸಿ ವೇಣುಗೋಪಾಲ್ ವಿರುದ್ಧವೂ ಅಸಮಾಧಾನ ಹೊರಹಾಕಿದ್ದರು.

ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿಯೂ ರೋಶನ್ ಹೆಸರು ಕೇಳಿಬಂದಿತ್ತು. ಇದಕ್ಕೂ ಮುನ್ನ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದ ಆರೋಪಕ್ಕೆ ಗುರಿಯಾಗಿದ್ದ ಶಾಸಕ ಕಂಪ್ಲಿ ಗಣೇಶ್ ಅವರನರನು ಕಾಂಗ್ರೆಸ್ ಅಮಾನತು ಮಾಡಿತ್ತು. ಆದರೆ ನಂತರ ಬದಲಾದ ರಾಜಕಾರಣದ ಬೆಳವಣಿಗೆಯಲ್ಲಿ ಗಣೇಶ್ ಅಮಾನತು ಹಿಂದಕ್ಕೆ ಪಡೆಯಲಾಗಿತ್ತು.