ರಾಜಸ್ಥಾನ ಚುನಾವಣೆ ರಾಹುಲ್ ನೇತೃತ್ವದಲ್ಲೇ ಕಾಂಗ್ರೆಸ್ ಸ್ಪರ್ಧೆ

First Published 4, Feb 2018, 10:23 AM IST
Congress to contest 2018 Rajasthan Assembly polls under Rahul
Highlights

ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ರಾಜಸ್ಥಾನ ವಿಧನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಇರಲು ಕಾಂಗ್ರೆಸ್ ನಿರ್ಧರಿಸಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಗುವುದು.

ನವದೆಹಲಿ: ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ರಾಜಸ್ಥಾನ ವಿಧನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಇರಲು ಕಾಂಗ್ರೆಸ್ ನಿರ್ಧರಿಸಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಗುವುದು.

 ನಮ್ಮ ಬಳಿ ಮುಖ್ಯಮಂತ್ರಿ ಇಲ್ಲ ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ. ಯುವ ಮುಖಂಡ ಸಚಿನ್ ಪೈಲಟ್ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದು, ಅವರನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಲಿದೆ ಎಂದು ಹೇಳಲಾಗಿತ್ತು. ಆದರೆ ಇದು ಇತರ ಗುಂಪುಗಳ ಮುನಿಸಿಗೆ ಕಾರಣ ಆಗಬಾರದೆಂದು ತಟಸ್ಥ ಕ್ರಮಕ್ಕೆ ಕಾಂಗ್ರೆಸ್ ಮುಂದಾಗಿದೆ.

loader