ಕೇಶವಮೂರ್ತಿ ಈ ಹಿಂದೆ ಜೆಡಿಎಸ್ ಪಕ್ಷದಿಂದ ಶ್ರಿನಿವಾಸ್ ಪ್ರಸಾದ್ ವಿರುದ್ಧ ಸ್ಪರ್ಧಿಸಿದ್ದರು.
ಬೆಂಗಳೂರು (ಫೆ.15): ಶ್ರೀನಿವಾಸ ಪ್ರಸಾದ್ ರಾಜಿನಾಮೆಯಿಂದ ತೆರವಾದ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಶವಮೂರ್ತಿ ಸ್ಪರ್ಧಿಸಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಸಂಸದ ಧ್ರುವನಾರಾಯಣ ಅವರ ಸಲಹೆ ಮೇರೆಗೆ ಕೇಶವಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಿದ್ದಾರೆ, ಅದಕ್ಕೆ ಹೈಕಮಾಂಡ್ ಅನುಮತಿ ನೀಡಿದೆಯೆಂದು ಪರಮೇಶ್ವರ್ ಹೇಳಿದ್ದಾರೆ.
ಕೇಶವಮೂರ್ತಿ ಈ ಹಿಂದೆ ಜೆಡಿಎಸ್ ಪಕ್ಷದಿಂದ ಶ್ರಿನಿವಾಸ್ ಪ್ರಸಾದ್ ವಿರುದ್ಧ ಸ್ಪರ್ಧಿಸಿದ್ದರು.
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರರಷ್ಟು ಗೆಲ್ಲಲಿದೆ, 2018ರ ವಿಧಾನಸಭಾ ಚುನಾವಣೆಯಲ್ಲೂ ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಅಧಿಕಾರ ಹಿಡಿಯಲಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
