ಪ್ರಧಾನಿ ನರೇಂದ್ರ ಮೋದಿ ಅವರು ₹40 ಕೋಟಿ ಪಡೆದಿದ್ದರು ಎಂಬ ಆರೋಪ ಹೊರಿಸಿ ಕಾಂಗ್ರೆಸ್ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಶೀಲಾ ದೀಕ್ಷಿತ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.

ನವದೆಹಲಿ(ಡಿ.24): ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ₹40 ಕೋಟಿ ಕಿಕ್‌'ಬ್ಯಾಕ್ ಪಡೆದಿದ್ದಾರೆ ಎಂದು ಹೇಳಲಾದ ಸಹಾರಾ ಕಂಪನಿಯಿಂದ ಉತ್ತರಪ್ರದೇಶದ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಶೀಲಾ ದೀಕ್ಷಿತ್ ಅವರೂ ಲಂಚ ಪಡೆದಿರುವ ವಿಚಾರ ಇದೀಗ ಬಹಿರಂಗವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ₹40 ಕೋಟಿ ಪಡೆದಿದ್ದರು ಎಂಬ ಆರೋಪ ಹೊರಿಸಿ ಕಾಂಗ್ರೆಸ್ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಶೀಲಾ ದೀಕ್ಷಿತ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.

ದೆಹಲಿ ಮುಖ್ಯಮಂತ್ರಿಯಾಗಿದ್ದ ಅವರು 2013ರ ಸೆಪ್ಟೆಂಬರ್‌ನಲ್ಲಿ ಸಹಾರಾ ಕಂಪನಿಯಿಂದ ₹1 ಕೋಟಿ ಪಡೆದಿದ್ದಾರೆ. ಅಲ್ಲದೆ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್‌ಗೆ ₹5 ಕೋಟಿ ಮತ್ತು ಛತ್ತೀಸ್‌ಗಡ ಮುಖ್ಯಮಂತ್ರಿ ರಮಣ ಸಿಂಗ್‌'ಗೆ ಸಹಾರಾ ಸಂಸ್ಥೆ ₹4 ಕೋಟಿ ಹಣ ನೀಡಿದೆ ಎಂಬುದಾಗಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗಷ್ಟೇ ಗುಜರಾತ್‌ನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಪ್ರಧಾನಿ ಮೋದಿ ಸಹಾರಾ ಕಂಪನಿಯಿಂದ ಕಿಕ್‌'ಬ್ಯಾಕ್ ಪಡೆದಿರುವ ಬಗ್ಗೆ ದಿನಾಂಕ ಸಹಿತವಾದ ಎಲ್ಲ ವಿವರಗಳನ್ನು ಮಾಧ್ಯಮಗಳಿಗೆ ನೀಡಿದ್ದರು.