ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ನಟ ಜಗ್ಗೇಶ್ ಭಾಗವಹಿಸಿರುವ ಟಿವಿ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲು ಕಾಂಗ್ರೆಸ್ ದೂರು
ಮೈಸೂರು (ಮಾ.30): ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ನಟ ಜಗ್ಗೇಶ್ ಅವರ ಟಿವಿ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಬೇಕೆಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆಯೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹೇಳಿದೆ.
ಬಿಜೆಪಿ ಪರ ಪ್ರಚಾರ ಕೈಗೊಂಡಿರುವ ಜಗ್ಗೇಶ್ ಏಪ್ರಿಲ್ 1 ಮತ್ತು 2ರಂದು ಖಾಸಗಿ ಮನರಂಜನಾ ವಾಹಿನಿಯಲ್ಲಿ ಪ್ರಸಾರವಾಗಲಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆ ಕಾರ್ಯಕ್ರಮವನ್ನು ನಿರ್ಬಂಧಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಏ.9ಕ್ಕೆ ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ
