Asianet Suvarna News Asianet Suvarna News

ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ಎಐಸಿಸಿಯಿಂದ ಹೊರಕ್ಕೆ?

ಖರ್ಗೆಯನ್ನು ಎಐಸಿಸಿಯಿಂದ ಹೊರಹಾಕಿ| ಇಲ್ಲದಿದ್ದರೆ, ಕಾಂಗ್ರೆಸ್‌ಗೆ ಉಳಿಗಾಲವಿಲ್ಲ ಎಂದು ಪ್ರತಿಪಾದನೆ| ಮಹಾರಾಷ್ಟ್ರ, ಹರ್ಯಾಣ ಎರಡರಲ್ಲೂ ಕಾಂಗ್ರೆಸ್‌ ಗೆಲ್ಲಲ್ಲ: ಸಂಜಯ್‌ ಭವಿಷ್ಯ| ಸೋನಿಯಾಗೆ ಆಪ್ತರಾದ ಹಿರಿಯ ಕಾಂಗ್ರೆಸ್ಸಿಗರ ವಿರುದ್ಧ ಆಕ್ರೋಶ

Congress Will Lose All But 3 4 Seats In Mumbai Says Sanjay Nirupam
Author
Bangalore, First Published Oct 7, 2019, 10:16 AM IST

ನವದೆಹಲಿ[ಅ.07]: ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ಟೀಕಾಪ್ರಹಾರ ಮುಂದುವರೆಸಿರುವ ಮುಂಬೈ ಮಹಾನಗರ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಸಂಜಯ್‌ ನಿರುಪಮ್‌, ಮಹಾರಾಷ್ಟ್ರ ಮಾತ್ರವಲ್ಲ ಹರಾರ‍ಯಣದಲ್ಲೂ ಕಾಂಗ್ರೆಸ್‌ ಸೋಲು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಆಘಾತ: 'ಕೈ' ತೊರೆದ ಮಾಜಿ ರಾಜ್ಯಾಧ್ಯಕ್ಷ

ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ನಿರುಪಮ್‌, ‘ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ, ಮಹಾರಾಷ್ಟ್ರ ಕಾಂಗ್ರೆಸ್‌ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ, ಜ್ಯೋತಿರಾಧಿತ್ಯ ಸಿಂಧಿಯಾ ಮೊದಲಾದ ನಾಯಕರನ್ನು ಎಐಸಿಸಿಯಿಂದ ಹೊರಹಾಕದ ಹೊರತೂ, ಪಕ್ಷಕ್ಕೆ ಉಳಿಗಾಲವಿಲ್ಲ’ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ಪಕ್ಷದ ಹಿತಾಸಕ್ತಿಗಾಗಿ ಹರಾರ‍ಯಣ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಅಶೋಕ್‌ ತನ್ವರ್‌ ಅವರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪಕ್ಷದ ವಿರುದ್ಧವೇ ಬಂಡಾಯ ಸಾರಿದ್ದ ತನ್ವರ್‌ ಶನಿವಾರವಷ್ಟೇ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಜೊತೆಗೆ, ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ನಿಷ್ಠೆ ಹೊಂದಿದ ಯುವ ನಾಯಕರನ್ನು ಪಕ್ಷದಿಂದ ಹೊರಹಾಕುವ ಸಂಚು ಆಂತರಿಕ ವಲಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತನ್ವರ್‌ ದೂರಿದ್ದರು.

ಕಾಂಗ್ರೆಸ್‌ನಲ್ಲಿ ಸೋನಿಯಾ ವರ್ಸಸ್‌ ರಾಹುಲ್‌?

‘ಕೆಲವು ಲಾಬಿಕೋರ ಭಟ್ಟಂಗಿಗಳು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಈ ಕುರಿತಾದ ತನ್ನ ಅಸಮಾಧಾನವನ್ನು ಹಿರಿಯ ನಾಯಕರ ಗಮನಕ್ಕೆ ತಂದಿದ್ದೇನೆ. ಆದಾಗ್ಯೂ, ಈ ಕುರಿತು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ಹಿಂದೆ ಪಕ್ಷದ ಟಿಕೆಟ್‌ ಭರವಸೆ ನೀಡಿದ್ದಾಗ್ಯೂ, ಕಾಂಗ್ರೆಸ್‌ ಹೈಕಮಾಂಡ್‌ 20 ಅಭ್ಯರ್ಥಿಗಳಿಗೆ ಟಿಕೆಟ್‌ ನಿರಾಕರಿಸಿದೆ. ಅಲ್ಲದೆ, ಈ ಬಾರಿಯ ಮಹಾರಾಷ್ಟ್ರ ಮತ್ತು ಹರಾರ‍ಯಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು ಖಚಿತ’ ಎಂದು ಸಂಜಯ್‌ ನಿರುಪಮ್‌ ಹೇಳಿದರು.

Follow Us:
Download App:
  • android
  • ios