ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ರೈತರ ಸಾಲವನ್ನು 10 ದಿನಗಳಲ್ಲೇ ಮನ್ನಾ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಮಧ್ಯ ಪ್ರದೇಶದಲ್ಲಿ ಘೋಷಿಸಿದ್ದಾರೆ. 

ಮಂಡಸೌರ್‌: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ 10 ದಿವಸದಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಘೋಷಿಸಿದ್ದಾರೆ. 

ರಾಜ್ಯದ ಮಂಡಸೌರ್‌ನಲ್ಲಿ ಕಳೆದ ವರ್ಷ ಜೂನ್‌ 6ರಂದು ನಡೆದ ರೈತ ಪ್ರತಿಭಟನೆ ವೇಳೆ ಗೋಲಿಬಾರ್‌ ಸಂಭವಿಸಿ 6 ರೈತರು ಪ್ರಾಣ ಕಳೆದುಕೊಂಡಿದ್ದರು. ಇದರ ಮೊದಲ ವರ್ಷಾಚರಣೆ ನಿಮಿತ್ತ ಇಲ್ಲಿ ಬೃಹತ್‌ ರೈತ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ರಾಹುಲ್‌, ‘ರಾಜ್ಯದ ಕಾಂಗ್ರೆಸ್‌ ನಾಯಕರಾದ ಕಮಲ್‌ ನಾಥ್‌ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಇಲ್ಲಿಯೇ ಕುಳಿತುಕೊಂಡಿದ್ದಾರೆ. 

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂತು ಎಂದರೆ 10 ದಿವಸದಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು. ಇದು ಖಚಿತ. 11ನೇ ದಿನವನ್ನೂ ನಾನು ತೆಗೆದುಕೊಳ್ಳುವುದಿಲ್ಲ’ ಎಂದು ಪ್ರಕಟಿಸಿದರು. ಕಾಂಗ್ರೆಸ್‌ ಆಳ್ವಿಕೆಯ ಪಂಜಾಬ್‌ ಹಾಗೂ ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ರಾಹುಲ್‌ ಹೇಳಿದರು.