ಬೆಳಗಾವಿ : ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದೀಗ ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯೂ ನಡೆದಿದೆ. 

ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರದಲ್ಲಿ ಚುನಾವಣೆ ನಡೆದಿದ್ದು, ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಗೆಲುವು ಖಚಿತ ಎಂದು ಸಚಿವ ಸತೀಶ್  ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಮೇ 23 ರಂದು ಫಲಿತಾಂಶ ಪ್ರಕಟವಾಗಲಿದ್ದು, ಕಾದು ನೋಡೋಣ. ಯಾವುದೇ ಹೇಳಿಕೆಗಳಿಗೂ ಚಿಂತಿಸುವ ಅಗತ್ಯವಿಲ್ಲ ಎಂದು ಸರ್ಕಾರ ಸುಭದ್ರವಾಗಿರಲಿದೆ ಎಂದು ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು.

ಇನ್ನು ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಅವರ ಹೆಳಿಕೆಗೆ ಹೆಚ್ಚು ಕಿಮ್ಮತ್ತು ನೀಡುವ ಅಗತ್ಯವಿಲ್ಲ. ಅವರೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ. ಎಂಎಲ್ ಸಿ ಅಷ್ಟೇ. ಸ್ಕಾರದಲ್ಲಿ ನಿರ್ಣಯ ತೆಗೆದುಕೊಳ್ಳುವಷ್ಟು ದೊಡ್ಡವರಲ್ಲ ಎಂದರು. 

ಇಂತಹ ಹೇಳಿಕೆಗಳನ್ನು ನೀಡುವುದು ಬಿಟ್ಟು ಅವರು ಸುಮ್ಮನಿದ್ದರೆ ಒಳಿತು. ಇಲ್ಲವೆಂದರೆ ಸರ್ಕಾರಕ್ಕೆ ಸಮಸ್ಯೆಯಾಗುತ್ತದೆ ಎಂದು ಬಸವರಾಜ ಹೊರಟ್ಟಿಗೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ