ಲೋಕಸಭಾ ಚುನಾವಣೆ : ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರು..?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 4, Aug 2018, 12:40 PM IST
Congress wont announce a PM candidate for Loksabha Election
Highlights

ಕಾಂಗ್ರೆಸ್ ನೇತೃತ್ವದ ವಿಪಕ್ಷಗಳಿಂದ ಮುಂದಿನ ಲೋಕಸಭಾ ಚುನಾವಣೆಗೆ  ಪ್ರಧಾನಿ ಅಭ್ಯರ್ಥಿ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೇ ಕಾಂಗ್ರೆಸ್ ಕೂಡ ಪ್ರಧಾನಿ ಅಭ್ಯರ್ಥಿ ಘೋಷಣೆಗೆ ನಿರಾಕರಿಸಿದೆ. 

ನವದೆಹಲಿ:  2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿ ಘೋಷಣೆಗೆ ನಿರಾಕರಿಸಿದೆ. ಪ್ರಧಾನಿ ಅಭ್ಯರ್ಥಿ ಆಯ್ಕೆ ಚುನಾವಣಾ ಫಲಿತಾಂಶದ ನಂತರವೇ ನಡೆಯಲಿದೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ. ಹೀಗಾಗಿ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರನ್ನು ಬಿಂಬಿಸಲು ಪಕ್ಷ ಮತ್ತೊಮ್ಮೆ ಹಿಂದೇಟು ಹಾಕಿದಂತಾಗಿದೆ. 

ಇನ್ನೊಂದೆಡೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗಿದೆ. ಆದರೆ, ಪಕ್ಷವು ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳನ್ನು ನಿರಾಕರಿಸಿದೆ. 

loader