ನವದೆಹಲಿ[ಜು.02]  ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ನಿರ್ಧಾರ ಕೈಬಿಡುವಂತೆ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಕಚೇರಿಯ ಎದುರು ಇದ್ದ ಮರಕ್ಕೆ ಕಾಂಗ್ರೆಸ್ ಕಾರ್ಯಕರ್ತ ನೇಣು ಹಾಕಿಕೊಳ್ಳಲು ಮುಂದಾಗಿದ್ದರು. ಇದನ್ನು ನೋಡಿದ ಪೊಲೀಸರು ತಕ್ಷಣವೇ ರಕ್ಷಣೆಗೆ ಮುಂದಾಗಿದ್ದಾರೆ. ನಂತರ ಸ್ಥಳೀಯರ ಸಹಾಯದಿಂದ ಆತನನ್ನು ಪೊಲೀಸರು ರಕ್ಷಿಸಿದ್ದಾರೆ.

ರಾಹುಲ್ ಗಾಂಧಿ ಅವರ ರಾಜೀನಾಮೆ ವಿರೋಧಿಸಿ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜಸ್ಥಾನದ ಸಹ-ಉಸ್ತುವಾರಿ ತರುಣ್ ಕುಮಾರ್ ಶನಿವಾರ ರಾಜೀನಾಮೆ ಸಲ್ಲಿಸಿದ್ದರು.