ರಾಣಿಬೆನ್ನೂರು[ಜು.26]:  ಕ್ಷೇತ್ರದ ಪಕ್ಷೇತರ ಶಾಸಕ ಆರ್‌. ಶಂಕರ್‌ ಅವರನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್‌ ಕಾರ್ಯಕರ್ತರು ನಗರದ ವಿವಿಧ ಸರ್ಕಲ್‌ಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. 

ಆರ್‌.ಶಂಕರ್‌ ಸಚಿವ ಸ್ಥಾನದ ದುರಾಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರಾಟ ನಡೆಸಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ ಎಂದರು. 

ಕ್ಷೇತ್ರದ ಮತದಾರರ ಆಶೀರ್ವಾದದಿಂದ ಆಯ್ಕೆಯಾಗಿದ್ದ ಅವರಲ್ಲಿ ವೈಯಕ್ತಿಕ ಹಿತಾಸಕ್ತಿಯಿತ್ತೇ ಹೊರತು ಕ್ಷೇತ್ರದ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸಲಿಲ್ಲ ಎಂದು ಈ ವೇಳೆ ಕಾರ್ಯಕರ್ತರು ಆರೋಪಿಸಿದರು.