ಮಂಡ್’ಸೌರ್ ರೈತರ ಮೇಲೆ ಗೋಲಿಬಾರ್ ಖಂಡಿಸಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ಕಾಂಗ್ರೆಸ್ ಕಾರ್ಯಕರ್ತರು ಶವಾಸನ ಮಾಡಿ ಪ್ರತಿಭಟಿಸಿದ್ದಾರೆ. ಇತ್ತೀಚೆಗೆ ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ 6 ಮಂದಿ ರೈತರು ಬಲಿಯಾಗಿದ್ದರು.
ಭೋಪಾಲ್: ಮಂಡ್’ಸೌರ್ ರೈತರ ಮೇಲೆ ಗೋಲಿಬಾರ್ ಖಂಡಿಸಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ಕಾಂಗ್ರೆಸ್ ಕಾರ್ಯಕರ್ತರು ಶವಾಸನ ಮಾಡಿ ಪ್ರತಿಭಟಿಸಿದ್ದಾರೆ.
ಇತ್ತೀಚೆಗೆ ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ 6 ಮಂದಿ ರೈತರು ಬಲಿಯಾಗಿದ್ದರು.
ಪೊಲೀಸರ ಕ್ರಮದ ವಿರುದ್ಧ ಮಧ್ಯಪ್ರದೇಶದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಯೋಗವನ್ನು ಮಾಡಿದ್ದಾರೆ.
ಸರ್ಕಾರ ಈಗಲಾದರೂ ರೈತರ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕೆಂದು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅರುಣ್ ಯಾದವ್ ಈ ಸಂದರ್ಭದಲ್ಲಿ ಹೇಳಿದ್ದಾರೆ.
