Asianet Suvarna News Asianet Suvarna News

ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?: ಯಾವ ರಾಜ್ಯಕ್ಕೆ..?

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯಾನಾಥ್ ಸರ್ಕಾರವನ್ನು ಕೊನೆಗಾಣಿಸಲು ಕಾಂಗ್ರೆಸ್‌ ಈಗಿನಿಂದಲೇ ತಾಲೀಮು ಆರಂಭಿಸಿದ್ದು, ಇದರ ಮುಂದಾಳತ್ವನ್ನು ಪ್ರಿಯಾಂಕಾ ಗಾಂಧಿ ಅವರಿಗೆ ವಹಿಸಿಸುವ ಪ್ಲಾನ್ ಸಹ ನಡೆದಿದೆ.  ಅಷ್ಟೇ ಅಲ್ಲದೇ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯಾಗಿಸಬೇಕೆಂಬ ಆಗ್ರಹಗಳು ಕೇಳಿಬಂದಿದೆ.

Congress workers want Priyanka Gandhi as UP CM candidate
Author
Bengaluru, First Published Jun 13, 2019, 1:08 PM IST

ಲಕ್ನೋ, (ಜೂನ್. 13): ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡು ಅಖಾಡಕ್ಕಿಳಿದು ತೀವ್ರ ಸಂಚಲನ ಮೂಡಿಸಿದ್ದ ಪ್ರಿಯಾಂಕಾ ಗಾಂಧಿ ಆಟ ನಡೆಯಲಿಲ್ಲ.

ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಪ್ರಿಯಾಂಕಾ ಗಾಂಧಿ ಬಿರುಸಿನ ಪ್ರಚಾರ ನಡೆಸಿದ್ದರೂ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ತಕ್ಕಮಟ್ಟಿ ಗೆಲ್ಲಲು ಸಾಧ್ಯವಾಗಿಲ್ಲ. ಉತ್ತರ ಪ್ರದೇಶದಲ್ಲಿ 80 ಸೀಟುಗಳ ಪೈಕಿ ಕಾಂಗ್ರೆಸ್ ಒಂದೇ ಕ್ಷೇತ್ರದಲ್ಲಿ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳೇನೆಂದು ಅರಿಯಲು ಪ್ರಿಯಾಂಕಾ ಗಾಂಧಿ ಅವರು ರಾಯ್ ಬರೇಲಿಯಲ್ಲಿ ಪರಾಮರ್ಶನಾ ಸಭೆ ನಡೆಸಿದ್ದು, 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಗಬೇಕೆಂದು ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ .

ಈ ಬಗ್ಗೆ ಸ್ವತಃ ವಾರಾಣಾಸಿ ಮಾಜಿ ಸಂಸದ, ಕಾಂಗ್ರೆಸ್ ನಾಯಕ ರಾಜೇಶ್ ಮಿಶ್ರಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  'ಮುಂಬರುವ ಉಪ ಚುನಾವಣೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವಂತೆ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡಿದ್ದೇವೆ. ಬಿಜೆಪಿಯ ಸವಾಲನ್ನು ಎದುರಿಸಲು ನೀವೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕು ಎಂದು ತಿಳಿಸಿದ್ದೇವೆ ಎಂದು ಹೇಳಿದರು.

ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಚುನಾವಣೆ ಎದುರಿಸುವುದು ಸೂಕ್ತ ಎಂಬ ಸಲಹೆಗಳನ್ನು ಸಹ ನೀಡಿದ್ದೇವ ಎಂದು ಮಾಧ್ಯಮಗಳಿಗೆ ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80 ಸೀಟುಗಳ ಪೈಕಿ ಕಾಂಗ್ರೆಸ್ ಗೆದ್ದಿರುವುದು ಒಂದೇ ಒಂದು ಕ್ಷೇತ್ರದಲ್ಲಿ. ಅದೂ  ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ಮಾತ್ರ.  ಉಳಿದಂತೆ ಯಾವ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಕಾಣಲು ಸಾಧ್ಯವಾಗಿಲ್ಲ.

 ಇದೀಗ ವಿಧಾನಸಭೆ ಚುನಾವಣೆಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಹೇಗಾದರೂ ಮಾಡಿ ಉತ್ತರ ಪ್ರದೇಶವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳು ಈಗಿನಿಂದಲೇ ತಾಲೀಮು ಆರಂಭಿಸಿದೆ.

ಶೀಘ್ರದಲ್ಲಿಯೇ ಉತ್ತರ ಪ್ರದೇಶದ 12 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದ್ದು, ಇದಕ್ಕೆ ಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿವೆ.

Follow Us:
Download App:
  • android
  • ios