ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡುತ್ತೇನೆ, ಎಂದು ಸೇಠ್ ಹೇಳಿದ್ದಾರೆ.
ರಾಯಚೂರು: ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಮೊಬೈಲ್’ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್, ತಾನು ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡುತ್ತೇನೆ, ಎಂದು ಸೇಠ್ ಹೇಳಿದ್ದಾರೆ.
ನನ್ನ ಜಿಲ್ಲೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮೊಬೈಲ್ನಲ್ಲಿ ವೀಕ್ಷಿಸುತ್ತಿದ್ದಾಗ ಈ ಚಿತ್ರ ಬಂದಿದ್ದನ್ನು ನೋಡಿದ್ದೇನೆ ಎಂದು ಸ್ಪಷ್ಟೀಕರಣ ನೀಡಿರುವ ಸೇಠ್, ಈ ಕುರಿತು ಪಕ್ಷದ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.