ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ ಒತ್ತಾಯ ಬಂದಿದೆ. ಆದರೆ, ಇನ್ನೂ ಯಾವುದು ಅಂತಿಮಗೊಂಡಿಲ್ಲ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಪಕ್ಷದ ನಾಯಕರು ಹಾಗೂ ಅಭಿಮಾನಿಗಳ ಅಭಿಪ್ರಾಯ ಪಡೆದು, ಅಂತಿಮವಾಗಿ ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ ಒತ್ತಾಯ ಬಂದಿದೆ. ಆದರೆ, ಇನ್ನೂ ಯಾವುದು ಅಂತಿಮಗೊಂಡಿಲ್ಲ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಪಕ್ಷದ ನಾಯಕರು ಹಾಗೂ ಅಭಿಮಾನಿಗಳ ಅಭಿಪ್ರಾಯ ಪಡೆದು, ಅಂತಿಮವಾಗಿ ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ತೇರದಾಳ ಕ್ಷೇತ್ರದಿಂದ ಸ್ಪರ್ಧೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತೇರದಾಳವೂ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಇನ್ನೂ ಅಂತಿಮವಾಗಿಲ್ಲ. ಇದು ಊಹಾಪೋಹ. ಹೈಕಮಾಂಡ್’ನೊಂದಿಗಿನ ಚರ್ಚೆಯ ನಂತರ ಈ ವಿಷಯ ನಿರ್ಧಾರವಾಗಲಿದೆ ಎಂದು ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಒತ್ತಾಯಗಳಿವೆ. ಅಲ್ಲದೇ, ಶಿಕಾರಿಪುರ ಜನರು ಸಹ ಕ್ಷೇತ್ರ ಬಿಟ್ಟುಹೋಗದಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.
ರಾಜಕೀಯ ಜನ್ಮ ಕೊಟ್ಟಿರುವ ಶಿಕಾರಿಪುರ ಕ್ಷೇತ್ರದ ಜನರು ಇಲ್ಲಿ ನಿಮಗೇನೂ ಕಡಿಮೆಯಾಗಿದೆ ಎಂಬುದಾಗಿ ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.
