Asianet Suvarna News Asianet Suvarna News

'ಲೋಕಸಭಾ ಚುನಾವಣೆಗೆ ಸ್ಪರ್ಧೆ ನನ್ನ ಜೀವನದ ಅತಿ ದೊಡ್ಡ ತಪ್ಪು'

ಲೋಕಸಭಾ ಚುನಾವಣೆಗೆ ಸ್ಪರ್ಧೆ| ನನ್ನ ಜೀವನದ ಅತಿ ದೊಡ್ಡ ತಪ್ಪು| ಕಾಂಗ್ರೆಸ್‌ ಸದಸ್ಯ ನಂದನ್‌ ನಿಲೇಕಣಿ ಪಶ್ಚಾತ್ತಾಪ

Contesting elections was big mistake says Nandan Nilekani
Author
Bangalore, First Published Jul 29, 2019, 7:38 AM IST
  • Facebook
  • Twitter
  • Whatsapp

ನವದೆಹಲಿ[ಜು.29]: ‘2014ರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ನನ್ನ ಜೀವನದಲ್ಲಿ ನಾನು ಮಾಡಿದ ಅತಿದೊಡ್ಡ ತಪ್ಪು, ಅದರಿಂದ ನಾನು ಪಾಠ ಕಲಿತಿದ್ದೇನೆ ಎಂದು ಇಸ್ಫೋಸಿಸ್‌ ಸಂಸ್ಥಾಪಕ ಮತ್ತು ಕಾಂಗ್ರೆಸ್ಸಿಗ ನಂದನ್‌ ನಿಲೇಕಣಿ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಿಗೆ ನೀಡಿದ ಸಂದರ್ಶನದಲ್ಲಿ ನಿಲೇಕಣಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯ ವೇಳೆ ವಿಶಿಷ್ಟಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ)ದ ಅಧ್ಯಕ್ಷರಾಗಿದ್ದ ನಂದನ್‌ ನಿಲೇಕಣಿ, ಆ ಹುದ್ದೆಗೆ ರಾಜೀನಾಮೆ ನೀಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅನಂತ್‌ಕುಮಾರ್‌ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ 3.2 ಲಕ್ಷ ಮತಗಳ ಅಂತರದಿಂದ ಸೋಲು ಕಂಡಿದ್ದರು.

ಬಳಿಕವೂ ಅವರು ಕಾಂಗ್ರೆಸ್‌ನ ಸದಸ್ಯರಾಗಿ ಮುಂದುವರೆದಿರುವರಾದರೂ, ಸಕ್ರಿಯ ರಾಜಕೀಯದಲ್ಲಿ ಭಾಗಿಯಾಗುತ್ತಿಲ್ಲ.

Follow Us:
Download App:
  • android
  • ios