ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿಯಿಂದ ಜನತೆ ತತ್ತರಿಸಿದ್ದು, ರಾಜ್ಯದ 10 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. 

ಬೆಂಗಳೂರು [ಆ.09]: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಹೀಗಾಗಿ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ನೀಡಲಾಗಿರುವ ರಜೆಯನ್ನು ಶುಕ್ರವಾರವೂ ಮುಂದುವರಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಡಗು, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ಗದಗ, ಹಾವೇರಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. 

ಕರ್ನಾಟಕದ ಪ್ರವಾಹಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉಳಿದಂತೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಎನ್‌.ಆರ್‌.ಪುರ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ.