ಈಗ ಇಲ್ಲಿನ ಕಾರ್ಪೋರೇಷನ್ ಬ್ಯಾಂಕ್ ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು (ನ.26): ದೇಶದಲ್ಲೇ ಮಂಗಳೂರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವಿದೆ. ಐದು ರಾಷ್ಟ್ರೀಯ ಬ್ಯಾಂಕ್ಗಳಿಗೆ ಜನ್ಮ ನೀಡಿರುವ ಹೆಗ್ಗಳಿಕೆಗೆ ಮಂಗಳೂರು ಪಾತ್ರವಾಗಿದೆ.
ಈಗ ಇಲ್ಲಿನ ಕಾರ್ಪೋರೇಷನ್ ಬ್ಯಾಂಕ್ ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನ ಹೊರವಲಯದಲ್ಲಿ ಇರುವ ಹಾರ್ಡ್ವೇರ್ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆ ಭೂಮಿಯಲ್ಲಿ ಮುಖ್ಯ ಕಚೇರಿಯ ಕಟ್ಟಡ ತಲೆ ಎತ್ತುತ್ತಿದ್ದು, ಬ್ಯಾಂಕ್ನ ಅಧ್ಯಕ್ಷರು, ಆಡಳಿತ ನಿರ್ದೇಶಕರು ಸೇರಿದಂತೆ ಪ್ರಮುಖರು ಬೆಂಗಳೂರಿನಲ್ಲೇ ಕಾರ್ಯಾ ನಿರ್ವಹಿಸಲಿದ್ದಾರೆ.
ಈಗಾಗಲೇ ಐದು ಪ್ರಮುಖ ಬ್ಯಾಂಕ್ಗಳ ಪೈಕಿ ಕೆನರಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ತನ್ನ ಮುಖ್ಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಿದೆ. ಈಗ ಸ್ಥಳಾಂರಿಸೋ ಸರದಿ ಕಾರ್ಪೊರೇಷನ್ ಬ್ಯಾಂಕ್ನದ್ದು.
ಕಾರ್ಪೊರೇಷನ್ ಬ್ಯಾಂಕ್ನ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರು ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆ ಪಾತ್ರವಾದ ಎರಡನೇ ದರ್ಜೆ ನಗರವಾಗಿದೆ. ಈ ಪ್ರದೇಶದ ಅಭಿವೃದ್ಧಿಗೆ ಇದು ದೊಡ್ಡ ಹಿನ್ನಡೆ ಎಂಬ ಅಭಿಪ್ರಾಯ ಕೇಳಿಬಂದಿದೆ.
