‘ಯೋಗಿ ಭ್ರಷ್ಟಾಚಾರವೇ ಸೋಲಿಗೆ ಕಾರಣ’: ಬಿಜೆಪಿ ಶಾಸಕರ ಆರೋಪ..!

Corruption in Yogi Adityanath government reason for defeat
Highlights

ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಹಾಗೂ ನೂರುಪುರ್ ವಿಧಾನಸಭಾ ಸೋಲು ಇದೀಗ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹೆಚ್ಚಿಸಿದೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಭ್ರಷ್ಟಾಚಾರವೇ ಕೈರಾನಾ ಹಾಗೂ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಕಾರಣ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ.

ಲಕ್ನೋ(ಜೂ.1): ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಹಾಗೂ ನೂರುಪುರ್ ವಿಧಾನಸಭಾ ಸೋಲು ಇದೀಗ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹೆಚ್ಚಿಸಿದೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಭ್ರಷ್ಟಾಚಾರವೇ ಕೈರಾನಾ ಹಾಗೂ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಕಾರಣ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ.

ಬಲೈಯಾ ಮತ್ತು ಹಾರ್ದೋಯಿ ಜಿಲ್ಲೆಯ ಇಬ್ಬರು ಬಿಜೆಪಿ ಶಾಸಕರು, ಭ್ರಷ್ಟಾಚಾರ ತಡೆಗಟ್ಟುವಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂತದ್ದೇ ಆರೋಪವನ್ನು ಉತ್ತರ ಪ್ರದೇಶ ಕ್ಯಾಬಿನೆಟ್ ಸಚಿವ ಓಂ ಪ್ರಕಾಶ್ ಕೂಡ ಮಾಡಿದ್ದಾರೆ.

ಅಲ್ಲದೇ ರಾಜ್ಯಸರ್ಕಾರದ ಅಧಿಕಾರಿಗಳು ಭ್ರಷ್ಟಾಚಾರಿಗಳಾಗಿದ್ದಾರೆ ಎಂದು ಗೊಪಾಮಾವು ಕ್ಷೇತ್ರದ ಬಿಜೆಪಿ ಶಾಸಕ  ಶ್ಯಾಮ್ ಪ್ರಕಾಶ್ ಆರೋಪಿಸಿದ್ದಾರೆ. ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪುತಿಲ್ಲ ಎಂದು ಬಿಜೆಪಿ ಶಾಸಕ ಆರೋಪಿಸಿದ್ದಾರೆ. 

loader