2002 ರ ಗೋಧ್ರೋತ್ತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ಕರೋಲ್'ನಲ್ಲಿರುವ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸೂಕ್ತ ಸಾಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.
ಗಾಂಧಿನಗರ (ಫೆ.03): 2002 ರ ಗೋಧ್ರೋತ್ತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ಕರೋಲ್ ನಲ್ಲಿರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸೂಕ್ತ ಸಾಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.
ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಿ.ಡಿ ಪಟೇಲ್, ಆರೋಪಿಗಳ ವಿರುದ್ಧ ಸೂಕ್ತ ಪುರಾವೆಗಳು ಲಭ್ಯವಾಗಿಲ್ಲ. ಸಂತ್ರಸ್ತರೂ ಕೂಡಾ ಆರೋಪಿಗಳನ್ನು ಗುರುತಿಸಲು ಅಸಮರ್ಥರಾಗಿದ್ದಾರೆ. ಹಾಗಾಗಿ 26 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದಿದ್ದಾರೆ.
